ದೇವರಹಿಪ್ಪರಗಿ: ಟ್ಯಾಂಕರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡ ಘಟನೆ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಮಂಗಳವಾರ ನಡೆದಿದೆ.
ಬೈಕ್ ಸವಾರ ಅಭಿಲಾಷ ಗುತ್ತೇದಾರ (25) ಮೃತಪಟ್ಟವರು. ಹಿಂಬದಿ ಸವಾರ ರಮೇಶ ದೊಡಮನಿ ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.