ADVERTISEMENT

ಭಾರಿ ದರೋಡೆಗೊಳಗಾಗಿದ್ದ ಮನಗೂಳಿ ಕೆನರಾ ಬ್ಯಾಂಕ್‌ಗೆ ಎಡಿಜಿಪಿ ಹಿತೇಂದ್ರ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 6:11 IST
Last Updated 10 ಅಕ್ಟೋಬರ್ 2025, 6:11 IST
ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರು ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಗೆ ಭೇಟಿ ನೀಡಿದರು. ಈ ವೇಳೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರು ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಗೆ ಭೇಟಿ ನೀಡಿದರು. ಈ ವೇಳೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.   

ಬಸವನಬಾಗೇವಾಡಿ: ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರು ವಿಜಯಪುರ ಜಿಲ್ಲೆ ಪ್ರವಾಸ ಕೈಗೊಂಡು ವೇಳೆ ಬುಧವಾರ ಸಂಜೆ ತಾಲ್ಲೂಕಿನ ಮನಗೂಳಿ ಪಟ್ಟಣಕ್ಕೆ ಭೇಟಿ ನೀಡಿದರು.

ಈ‌ ಸಂದರ್ಭದಲ್ಲಿ ಮನಗೂಳಿ ಪೊಲೀಸ್ ಠಾಣೆಗೆ ಹಾಗೂ ಇತ್ತಿಚೆಗೆ ಕಳ್ಳತನವಾಗಿದ್ದ ಮನಗೂಳಿ ಕೆನರಾ ಬ್ಯಾಂಕ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ವೇಳೆ ಬೆಳಗಾವಿ ವಲಯ ಐಜಿಪಿ‌ ಡಾ. ಚೇತನಸಿಂಗ್ ರಾಥೋಡ್, ಎಸ್ಪಿ ಲಕ್ಷ್ಮಣ ನಿಂಬರಗಿ, ಅಡಿಷನಲ್ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಟಿ.ಎಸ್.ಸುಲ್ಫಿ, ಸಿಪಿಐ ರಮೇಶ ಅವಜಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.