ADVERTISEMENT

ಕೋವಿಡ್ ಲಸಿಕೆ ಪಡೆದುಕೊಳ್ಳಲು ಮಕ್ಕಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 12:34 IST
Last Updated 7 ಫೆಬ್ರುವರಿ 2022, 12:34 IST
ಪಿ.ಸುನೀಲ್‌ಕುಮಾರ್
ಪಿ.ಸುನೀಲ್‌ಕುಮಾರ್   

ವಿಜಯಪುರ: ಜಿಲ್ಲೆಯಲ್ಲಿ 15ರಿಂದ17 ವರ್ಷದ 1,23,437ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಗುರಿ ಇದ್ದು, ಈಗಾಗಲೇ 90,716 ಮಕ್ಕಳಿಗೆ ಮೊದಲನೇ ಡೋಸ್ ಲಸಿಕಾಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ಕೋವಿಡ್‌ ಲಸಿಕಾಕರಣದ ಸಂಬಂಧ ಆರೋಗ್ಯ ಇಲಾಖೆ ಸಿಬ್ಬಂದಿ ಶಾಲಾ,ಕಾಲೇಜುಗಳಿಗೆ ಬಂದಾಗ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಶಾಲೆಗೆ ಹೋಗದೆ ಇರುವ 15-17 ವರ್ಷದ ಮಕ್ಕಳು ತಮ್ಮ ಗ್ರಾಮದ, ವಾರ್ಡಿನ ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಕೋವಿಡ್-19 ಲಸಿಕೆ ಪಡೆದುಕೊಳ್ಳಲು ಅವರು ತಿಳಿಸಿದ್ದಾರೆ.

ADVERTISEMENT

ಕೋವಿಡ್ ರೋಗದ ವಿರುದ್ದ ಹೋರಾಡಲು 15-17 ವರ್ಷದ ಮಕ್ಕಳ ಪಾತ್ರ ಬಹು ಮುಖ್ಯವಾಗಿರುತ್ತದೆ.ಪಾಲಕರು, ಪೋಷಕರು ತಮ್ಮ ಮನೆಯಲ್ಲಿರುವ 15-17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಲು ಪ್ರೇರೇಪಿಸಿ ಹಾಗೂ ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಿ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.