ADVERTISEMENT

ಸಕಾರಾತ್ಮಕ ಚಿಂತನೆಯಿಂದ ಬದುಕು ಕಟ್ಟಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 6:13 IST
Last Updated 29 ಜನವರಿ 2026, 6:13 IST
ವಿಜಯಪುರದ ಮಹಿಳಾ ವಿವಿಯಲ್ಲಿ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರವನ್ನು ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಿಸಿದರು
ವಿಜಯಪುರದ ಮಹಿಳಾ ವಿವಿಯಲ್ಲಿ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರವನ್ನು ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಿಸಿದರು   

ವಿಜಯಪುರ: ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು ಸಕಾರಾತ್ಮಕ ಆಲೋಚನೆಗಳಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿದ ಅವರು, ‘ಉಪನ್ಯಾಸಕರು ಅಪಾರ ಪರಿಶ್ರಮದೊಂದಿಗೆ ಆಧುನಿಕ ವಿಜ್ಞಾನ, ತಂತ್ರಜ್ಞಾನ ಹಾಗೂ ಅಂತರ್ಜಾಲವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮೌಲ್ಯಮಾಪನ ಕುಲಸಚಿವ ಬಿ.ಎಲ್. ಲಕ್ಕಣ್ಣವರ ಮಾತನಾಡಿ, ‘ಉಪನ್ಯಾಸಕರ ಜ್ಞಾನಾರ್ಜನೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕ. ಶಿಕ್ಷಕರು ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳ ವಿವಿಧ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

ADVERTISEMENT

ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪಿ.ಜಿ. ತಡಸದ, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಉದಯಕುಮಾರ ಕುಲಕರ್ಣಿ, ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಸಕ್ಪಾಲ್ ಹೂವಣ್ಣ ಮಾತನಾಡಿದರು.

ಸಂಯೋಜಕಿ ಮೆಹರಾಜಬೇಗಂ ಸೈಯ್ಯದ, ರೇಖಾ ಗಣಿಹಾರ, ಚಲುವರಾಜು, ಜಗದೀಶ್, ಸಾವಿತ್ರಿ, ಜಕ್ಕವ್ವ ವಠ್ಠಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.