ADVERTISEMENT

ವಿಜಯಪುರ: ಗುಣಮಟ್ಟದ ಬೋಧನೆಗೆ ಸಲಹೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರ: ವಿವಿಧ ಕಾಮಗಾರಿಗಳಿಗೆ ಯತ್ನಾಳ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 14:02 IST
Last Updated 24 ಜೂನ್ 2020, 14:02 IST
ವಿಜಯಪುರ ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ಆವರಣಕ್ಕೆ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬುಧವಾರ ಭೂಮಿ ಪೂಜೆ ನೆರವೇರಿಸಿದರು
ವಿಜಯಪುರ ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ಆವರಣಕ್ಕೆ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬುಧವಾರ ಭೂಮಿ ಪೂಜೆ ನೆರವೇರಿಸಿದರು   

ವಿಜಯಪುರ: ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ಆವರಣಕ್ಕೆ ಕಂಪೌಂಡ್ ಗೋಡೆ ನಿರ್ಮಾಣ, ರಸ್ತೆ ಕಾಮಗಾರಿ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ಕೆ.ಬಿ.ಜೆ.ಎನ್.ಎಲ್, ನಿರ್ಮಿತಿ ಕೇಂದ್ರ, ಕೆ.ಆರ್.ಐ.ಡಿ.ಎಲ್ ಇಲಾಖೆಯಿಂದ ಮಂಜೂರಾದ ₹3.20 ಕೋಟಿ ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯತ್ನಾಳ ಹೇಳಿದರು.

ವಿಶ್ವವಿದ್ಯಾಲಯದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಾಗಬೇಕು, ಗುಣಮಟ್ಟದ ಬೋಧನೆ ಜೊತೆಗೆ ಉತ್ತಮವಾದ ವಾತಾವರಣ ನಿರ್ಮಾಣ ಮಾಡಬೇಕಾಗಿದೆ ಎಂದರು.

ADVERTISEMENT

ಡಾ.ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ಇನ್ನೂ ಹೆಚ್ಚಿನ ಅಧ್ಯಯನ ವಿಭಾಗಗಳನ್ನು ತೆರೆಯುವ ಆಸಕ್ತಿಯನ್ನು ಕುಲಪತಿ ಪ್ರಸ್ತಾಪಿಸಿದ್ದಾರೆ. ಈ ವಿಷಯವಾಗಿ ಚರ್ಚಿಸಿ, ಕ್ರಮ ಕೈಗೋಳ್ಳಲಾಗುವುದು ಎಂದು ಹೇಳಿದರು.

ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್.ಪಾಟೀಲ್, ವಿ.ಡಿ.ಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ್, ವಿಕ್ರಮ್ ಗಾಯಕವಾಡ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಹುಲ್ ಜಾಧವ್, ಶಿವರುದ್ರ ಬಾಗಲಕೊಟಿ, ಸಂತೋಷ ಪಾಟೀಲ, ಪ್ರಕಾಶ ಚವ್ಹಾಣ, ಗುತ್ತಿಗೆದಾರರಾದ ಗುರು ಕವಲಗಿ, ನಾಗರಾಜ ಮುಳವಾಡ, ರಾಜಶೇಖರ ಭಜಂತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.