ADVERTISEMENT

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಏಪ್ರಿಲ್‌ಗೆ ಪೂರ್ಣ: ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 13:17 IST
Last Updated 8 ಡಿಸೆಂಬರ್ 2022, 13:17 IST
ವಿಜಯಪುರ ನಗರದ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು  ಸಂಸದ ರಮೇಶ ಜಿಗಜಿಣಗಿ ಗುರುವಾರ  ವೀಕ್ಷಿಸಿದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಇದ್ದಾರೆ
ವಿಜಯಪುರ ನಗರದ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು  ಸಂಸದ ರಮೇಶ ಜಿಗಜಿಣಗಿ ಗುರುವಾರ  ವೀಕ್ಷಿಸಿದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಇದ್ದಾರೆ   

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ಮಾರ್ಚ್ ಅಥವಾ ಏಪ್ರಿಲ್‌ಗೆ ಪೂರ್ಣಗೊಂಡು ವಿಮಾನಗಳು ಹಾರಾಟ ನಡೆಸಲಿವೆ ಎಂದು ಸಂಸದ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಗುರುವಾರ ವೀಕ್ಷಿಸಿದ ಅವರು, ಸರ್ಕಾರ ವಿಮಾನ ನಿಲ್ದಾಣವನ್ನು ಏರ್‌ಬಸ್-320 ಮೇಲ್ದರ್ಜೆಗೇರಿಸಿರುವುದರಿಂದ ಕಾಮಗಾರಿಗಳು ವೇಗ ಪಡೆದುಕೊಂಡಿದೆ ಎಂದು ಅವರು ಹೇಳಿದರು.

ವಿಜಯಪುರ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ, ಜಿಲ್ಲೆಯ ಆಮದು-ರಫ್ತು ವ್ಯವಹಾರ, ವ್ಯಾಪಾರ ವಹಿವಾಟು, ಸರಕು-ಸಾಗಾಣಿಕೆ ವ್ಯವಸ್ಥೆ ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ADVERTISEMENT

‌ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್‌ ರಾಜು ಮುಜುಂದಾರ, ಸಹಾಯಕ ಎಂಜಿನಿಯರ್‌ ರೇವಣ್ಣ ಮಸಳಿ, ಗುತ್ತಿಗೆದಾರ ಸಿ.ಬಿ.ಆಲೂರ, ಶರವಣನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.