ADVERTISEMENT

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 14:40 IST
Last Updated 1 ಮಾರ್ಚ್ 2021, 14:40 IST
ವಿಜಯಪುರ ಸಮೀಪ ಬುರಣಾಪುರ–ಮದಭಾವಿಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೋಮವಾರ ಪರಿಶೀಲಿಸಿದರು
ವಿಜಯಪುರ ಸಮೀಪ ಬುರಣಾಪುರ–ಮದಭಾವಿಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೋಮವಾರ ಪರಿಶೀಲಿಸಿದರು   

ವಿಜಯಪುರ: ವಿಜಯಪುರ ವಿಮಾನ ನಿರ್ಮಾಣ ಕಾಮಗಾರಿಯು ಉತ್ತಮ ಗುಣಮಟ್ಟದೊಂದಿಗೆ ವೇಗವಾಗಿ ನಡೆಯುತ್ತಿದ್ದು, ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.

ಬುರಣಾಪುರ–ಮದಭಾವಿಯಲ್ಲಿ ನಡೆಯುತ್ತಿರುವವಿಮಾನ ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

₹ 95 ಕೋಟಿ ವೆಚ್ವದಲ್ಲಿ ಮೊದಲ ಹಂತದ ಕಾಮಗಾರಿಯು ತ್ವರಿತವಾಗಿ ನಡೆಯುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿರುವುದು ತೃಪ್ತಿಕರ ಸಂಗತಿಯಾಗಿದೆ. 2ನೇ ಹಂತದ ಕಾಮಗಾರಿಯು ₹ 125 ಕೋಟಿ ವೆಚ್ವದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ADVERTISEMENT

ನಂತರ ಡುಪ್ಲೆಕ್ಸ್ ಕೋರ್ಟ್ ನಿರ್ಮಾಣ ಕಾಮಗಾರಿ ಪರಿಶೀಲಿದ ಅವರು, ಕಾಮಗಾರಿಯು ಪೂರ್ಣಗೊಂಡಿದ್ದು, ಕಂಪ್ಯೂಟರ್ ಜೋಡಣೆ, ಇಂಟರ್ ನೆಟ್ ಸಂಪರ್ಕ ಕಾಮಗಾರಿಯು ನಡೆಯುತ್ತಿದೆ. ಈ ಕಾಮಗಾರಿಯ ಗುಣಮಟ್ಟ ಹಾಗೂ ಕಟ್ಟಡ ವಿನ್ಯಾಸಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.