ವಿಜಯಪುರ: ‘ಆಲಮಟ್ಟಿ ಜಲಾಶಯದ ಎತ್ತರದಿಂದ ಏನೂ ಸಮಸ್ಯೆ ಆಗದಿದ್ದರೆ ಒಳ್ಳೆಯದು. ಈ ವಿಷಯದ ಕುರಿತು ಸಮಗ್ರ ಚರ್ಚೆ ಮಾಡಿ ಮುಂದಿನ ಹೆಜ್ಜೆ ಇರಿಸಲಾಗುವುದು’ ಎಂದು ಮಹಾರಾಷ್ಟ್ರದ ಜಲ ಸಂರಕ್ಷಣಾ ಸಚಿವ ಸಂಜಯ ರಾಠೋಡ ಹೇಳಿದರು.
ತಿಕೋಟಾ ತಾಲ್ಲೂಕಿನ ಸೋಮದೇವರಹಟ್ಟಿ ತಾಂಡಾದಲ್ಲಿ ಬುಧವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ವಿರೋಧ ವ್ಯಕ್ತವಾದ ವಿಷಯದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
‘ಜಲಾಶಯದ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಸಂಪುಟ ಮಟ್ಟದಲ್ಲಿ ಚರ್ಚೆಯಾಗಿದೆ. ಕೆಲ ತಾಂತ್ರಿಕ ವಿಚಾರದಲ್ಲಿ ಸಮಸ್ಯೆ ಇದೆ. ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ
ಉಪ ಮುಖ್ಯಮಂತ್ರಿ ಚರ್ಚೆ ಮಾಡಿ ಮುಂದಿನ ನಿರ್ಣಯ ಮಾಡುತ್ತಾರೆ. ಇದು ಮಹಾರಾಷ್ಟ್ರ ರಾಜ್ಯದ ಪ್ರಶ್ನೆಯಾಗಿದೆ, ಹೀಗಾಗಿ ಸಮಾಲೋಚಿಸಿ ನಿರ್ಣಯ ತೆಗೆದುಕೊಳ್ಳ ಲಾಗುವುದು’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.