ಆಲಮೇಲ: ಇಂದಿನ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಆಧಾರಿತ ಗುಣಾತ್ಮಕ ಶಿಕ್ಷಣದ ಅವಶ್ಯಕತೆ ಇದೆ ಎಂದು ಹಿರಿಯ ಮಕ್ಕಳ ಸಾಹಿತಿ ಹ.ಮ.ಪೂಜಾರ ಹೇಳಿದರು.
ಅವರು ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಪೆನೆಲ್ ಬೋರ್ಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
‘ಈ ಶಿಕ್ಷಣ ಸಂಸ್ಥೆಯಲ್ಲಿ ಡಿಜಿಟಲ್ ಪೆನೆಲ್ ಬೋರ್ಡ್ ಸೇರಿದಂತೆ ಹಲವು ತಂತ್ರಜ್ಞಾನ ಆಧಾರಿತ ಕಲಿಕಾ ಸಾಮಗ್ರಿಗಳನ್ನು ಬಳಸಲಾಗುತ್ತಿದೆ. ಇದು ಮಕ್ಕಳ ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗಲಿದೆ’ ಎಂದು ತಿಳಿಸಿದರು.
ಈ ಶಾಲೆಯ ಗ್ರಂಥಾಲಯಕ್ಕೆ ಹ.ಮ. ಪೂಜಾರ 100 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಂದಗಿಯ ಎ.ಚ.ಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಲಮೇಲ ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ, ಸಿಂದಗಿಯ ಮಕ್ಕಳ ಸಾಹಿತ್ಯ ಸಂಗಮದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ.ಎಸ್.ಸಾತಿಹಾಳ, ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೊಗೂರ, ನಿವೃತ್ತ ವಿಜ್ಞಾನ ಶಿಕ್ಷಕರಾದ ಸಿದ್ರಾಮ ಹೂಗಾರ, ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ವೀಣಾ ಗುಡಿಮಠ, ಸರುಬಾಯಿ ಬಂಡಗರ, ಸುನೀತಾ ಗುಂಡದ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.