ಆಲಮಟ್ಟಿ: ಇಲ್ಲಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ (ಪಾರ್ವತಿ ಕಟ್ಟಾ ಸೇತುವೆ ಸಮೀಪ)ಯಲ್ಲಿ ಹಾಸಿಗೆ ತೊಳೆಯಲು ಹೋಗಿ ಕಾಲು ಜಾರಿ ಕಾಲುವೆಯಲ್ಲಿ ಬಿದ್ದ ಬಾಲಕ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಬಾಲಕ ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಗ್ರಾಮದ ರವಿ ಮಂಜುನಾಥ ಜಗ್ಗಲ (16). ಬಾಲಕ ಇಲ್ಲಿಯ ಆರ್ ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ.
ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳದಿಂದ ಅಗ್ನಿಶಾಮಕ ದಳದವರು ಸ್ಥಳೀಯ ಮೀನುಗಾರರು ಕಾಲುವೆಯಲ್ಲಿ ನಾಪತ್ತೆಯಾದ ಬಾಲಕನಿಗಾಗಿ ಹುಡುಕಾಟ ನಡೆಸಿದರು. ಸಂಜೆಯಾದರೂ ಪತ್ತೆಯಾಗಲಿಲ್ಲ.
ಘಟನಾ ಸ್ಥಳಕ್ಕೆ ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಪಿಎಸ್ ಐ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.