ADVERTISEMENT

ಸೆ.6ಕ್ಕೆ ಆಲಮಟ್ಟಿ ಜಲಾಶಯಕ್ಕೆ ಬಾಗಿನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 6:08 IST
Last Updated 3 ಸೆಪ್ಟೆಂಬರ್ 2025, 6:08 IST
ಆಲಮಟ್ಟಿ ಜಲಾಶಯದ ಚಿತ್ರ
ಆಲಮಟ್ಟಿ ಜಲಾಶಯದ ಚಿತ್ರ   

ಆಲಮಟ್ಟಿ: ಉತ್ತರ ಕರ್ನಾಟಕದ ರೈತರ ಜೀವನಾಡಿ ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇಲ್ಲಿಯ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೆ.6ರಂದು ಬಾಗಿನ ಅರ್ಪಿಸುವ ಸಾಧ್ಯತೆ ಇದೆ ಎಂದು ಆಲಮಟ್ಟಿ ಅಣೆಕಟ್ಟು ವಲಯ ಮುಖ್ಯಎಂಜಿನಿಯರ್ ಡಿ.ಬಸವರಾಜ ತಿಳಿಸಿದ್ದಾರೆ.

ಸೆ.18 ರಂದು ವಿಜಯಪುರದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯೂ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಸಚಿವ ಸಂಪುಟ ಸಭೆ ನಿಗದಿಯಾದರೆ, ಆ ದಿನವೇ ಬಾಗಿನ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

648 ಟಿಎಂಸಿ ಅಡಿ ನೀರು:

ADVERTISEMENT

ಆಲಮಟ್ಟಿ ಜಲಾಶಯಕ್ಕೆ ಮೇ 19 ರಿಂದ ಸೆ.2 ರವರೆಗೆ  648.604 ಟಿಎಂಸಿ ಅಡಿ ನೀರು ಹರಿದು ಬಂದಿದೆ. ಜಲಾಶಯದಿಂದ 545.417 ಟಿಎಂಸಿ ಅಡಿ ನೀರು ನಾರಾಯಣಪುರ ಜಲಾಶಯದ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಹರಿದು ಹೋಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.