ಆಲಮಟ್ಟಿ ಜಲಾಶಯ
ಆಲಮಟ್ಟಿ: ಆಲಮಟ್ಟಿ ಜಲಾಶಯದ ಒಳಹರಿವು ಕಡಿಮೆಯಾದ ಕಾರಣ, ಹೊರಹರಿವನ್ನು ಭಾನುವಾರ ಕಡಿತಗೊಳಿಸಲಾಗಿದೆ.
ಶನಿವಾರ ಬೆಳಿಗ್ಗೆ 80 ಸಾವಿರ ಕ್ಯೂಸೆಕ್ ಇದ್ದ ಹೊರಹರಿವನ್ನು ಸಂಜೆಯ ವೇಳೆಗೆ 42,500 ಕ್ಯೂಸೆಕ್‌ಗೆ ಇಳಿಸಲಾಗಿತ್ತು. ಭಾನುವಾರ ಬೆಳಿಗ್ಗೆ 10ಕ್ಕೆ ಹೊರಹರಿವನ್ನು 20,000 ಕ್ಯೂಸೆಕ್‌ಗೆ ಇಳಿಸಲಾಗಿದೆ.
ಕಳೆದ ಒಂದು ತಿಂಗಳಿಂದ ಜಲಾಶಯದ ನೀರನ್ನು ಗೇಟ್‌ಗಳ ಮೂಲಕ ಹೊರಬಿಡಲಾಗುತ್ತಿತ್ತು. ಬೆಳಿಗ್ಗೆ 78,497 ಕ್ಯೂಸೆಕ್ ಇದ್ದ ಒಳಹರಿವು ಸಂಜೆಯ ವೇಳೆಗೆ 69,084 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಜಲಾಶಯದಲ್ಲಿ 92 ಟಿಎಂಸಿ ಅಡಿ (ಸಂಗ್ರಹ ಸಾಮರ್ಥ್ಯದ ಶೇ 74 ರಷ್ಟು) ನೀರು ಸಂಗ್ರಹವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.