ಆಲಮಟ್ಟಿ ಜಲಾಶಯ
ಆಲಮಟ್ಟಿ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿದ ಕಾರಣ, ಜಲಾಶಯದಿಂದ ಬುಧವಾರ ರಾತ್ರಿಯಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಬಿಡಲಾಗುತ್ತಿದೆ.
ಜಲಾಶಯದ ಹೊರಹರಿವು ಬೆಳಿಗ್ಗೆ 70,000 ಕ್ಯೂಸೆಕ್ ಇತ್ತು, ನಂತರ 11 ಗಂಟೆ ಸುಮಾರು ಹೊರಹರಿವು 80,000 ಕ್ಯೂಸೆಕ್ ಗೆ ತಲುಪಿತ್ತು. ರಾತ್ರಿ 8ಕ್ಕೆ ಒಂದು ಲಕ್ಷ ಕ್ಯೂಸೆಕ್ ನೀರು ಹೊರಹಾಯಿಸಲಾತು ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯಕ್ಕೆ ಬುಧವಾರ ಒಂದೇ ದಿನ 7.4 ಟಿಎಂಸಿ ಅಡಿ ನೀರು ಹರಿದು ಬಂದಿದೆ. 517.32 ಮೀ ಎತ್ತರದವರೆಗೆ ನೀರು ಇದ್ದು, 88.5 ಟಿಎಂಸಿ ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.