ADVERTISEMENT

ಆಲಮಟ್ಟಿ ಜಲಾಶಯ: ಬಿಗಿ ಭದ್ರತೆ

ಆಪರೇಷನ್ ಸಿಂದೂರ್ ಹಿನ್ನೆಲೆ: ತಪಾಸಣೆ ಹೆಚ್ಚಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 7 ಮೇ 2025, 16:01 IST
Last Updated 7 ಮೇ 2025, 16:01 IST
ಆಲಮಟ್ಟಿಯ ಲಾಲ್‌ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ
ಆಲಮಟ್ಟಿಯ ಲಾಲ್‌ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ   

ಆಲಮಟ್ಟಿ (ವಿಜಯಪುರ ಜಿಲ್ಲೆ): ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಳಿಕ ಭದ್ರತಾ ದೃಷ್ಟಿಯಿಂದ ಆಲಮಟ್ಟಿ ಅಣೆಕಟ್ಟಿಯಲ್ಲಿ ಬುಧವಾರ ತಪಾಸಣೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಜಲಾಶಯದ ಭದ್ರತೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌) ಅಧೀನದಲ್ಲಿದ್ದು, ಭದ್ರತಾ ಕ್ರಮ ಕೈಗೊಳ್ಳಲಾಗಿದೆ.

‘ಅಣೆಕಟ್ಟುಗಳ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಇಲಾಖೆಯಿಂದ ಸೂಚನೆ ಬಂದಿದೆ’ ಎಂದು ಅಣೆಕಟ್ಟು ಭದ್ರತಾ ಉಸ್ತುವಾರಿ ಅಧಿಕಾರಿ ಕೆಎಸ್‌ಐಎಸ್‌ಎಫ್‌ ಇನ್‌ಸ್ಪೆಕ್ಟರ್‌ ಶಿವಲಿಂಗ ಕುರೆನ್ನವರ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT