
ಪ್ರಜಾವಾಣಿ ವಾರ್ತೆ
ಆಲಮಟ್ಟಿ: ಆಲಮಟ್ಟಿ ಜಲಾಶಯದ ಒಳಹರಿವು ಭಾನುವಾರ ಸಂಜೆ 99,805 ಕ್ಯೂಸೆಕ್ ಗೆ ಏರಿಕೆಯಾಗಿದ್ದು ಇದು ಈ ವರ್ಷದ ಅತಿ ಹೆಚ್ಚಿನ ಒಳಹರಿವಾಗಿದೆ.
‘ಭಾನುವಾರ ಬೆಳಿಗ್ಗೆ 73,958 ಕ್ಯೂಸೆಕ್ ಇದ್ದ ಒಳಹರಿವು ಸಂಜೆಯ ವೇಳೆಗೆ ಹೆಚ್ಚಾಗಿದೆ. ಸೋಮವಾರ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ 50 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ’ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.