ADVERTISEMENT

ಅಂಬೇಡ್ಕರ್ ಕಂಚಿನ ಪುತ್ಥಳಿ; ವೃತ್ತ ನಿರ್ಮಾಣಕ್ಕೆ ಚಾಲನೆ

ಭೂಮಿ ಪೂಜೆ ನೆರವೇರಿಸಿದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 12:46 IST
Last Updated 15 ಫೆಬ್ರುವರಿ 2021, 12:46 IST
ವಿಜಯಪುರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಮತ್ತು ವೃತ್ತ ನಿರ್ಮಾಣ ಕಾಮಗಾರಿಗೆ ಸೋಮವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಭೂಮಿ ಪೂಜೆ ನೆರವೇರಿಸಿದರು 
ವಿಜಯಪುರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಮತ್ತು ವೃತ್ತ ನಿರ್ಮಾಣ ಕಾಮಗಾರಿಗೆ ಸೋಮವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಭೂಮಿ ಪೂಜೆ ನೆರವೇರಿಸಿದರು    

ವಿಜಯಪುರ: ಇಲ್ಲಿನಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ₹1.17 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಮತ್ತು ವೃತ್ತ ನಿರ್ಮಾಣ ಕಾಮಗಾರಿಗೆ ಸೋಮವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಭೂಮಿ ಪೂಜೆ ನೆರವೇರಿಸಿದರು.

ಇಡೀ ಉತ್ತರ ಕರ್ನಾಟಕಕ್ಕೆ ಮಾದರಿಯಾಗುವಂತೆ ವಿಜಯಪುರದಲ್ಲಿ ಅಂಬೇಡ್ಕರ್‌ ವೃತ್ತ ಮತ್ತು ಪುತ್ಥಳಿಯನ್ನು ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಕಾರಜೋಳ ಸೂಚಿಸಿದರು.

ಮುಂಬರುವ ನವೆಂಬರ್ ಅಥವಾ ಸಂವಿಧಾನ ಸಮರ್ಪಣಾ ದಿನವಾದ ಜನವರಿ 26 ರೊಳಗೆ ಈ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ADVERTISEMENT

1974ರಲ್ಲಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಉಪರಾಷ್ಟ್ರಪತಿ ಬಿ.ಡಿ ಜತ್ತಿ ಅವರು ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಈಗಿನ ಮೂರ್ತಿಯನ್ನು ಅನಾವರಣಗೊಳಿಸಿದ್ದರು ಎಂದು ಸ್ಮರಿಸಿದರು.

ಮೂರ್ತಿ ಬಹಳಷ್ಟು ಹಳೇಯದಾದ ಕಾರಣ ಬದಲಾವಣೆ ಮಾಡಲುಶಾಸಕ ಎಂ.ಬಿ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಮತ್ತು ಜನತೆಯ ಆಶಯದಂತೆ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಕೃಷ್ಣ ಭಾಗ್ಯ ಜಲ ನಿಗಮದ ಎಸ್‌ಟಿಪಿ, ಟಿಎಸ್‌ಪಿ ಅನುದಾನದಲ್ಲಿ ವೃತ್ತ ನಿರ್ಮಾಣ ಮತ್ತು ಪುತ್ಥಳಿ ನಿರ್ಮಾಣವಾಗುತ್ತಿದೆ ಎಂದರು

ಸಂಸದ ರಮೇಶ ಜಿಗಜಿಣಗಿ, ಜಿ.ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಶಾಸಕ ಎಂ.ಬಿ ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವಾನಂದ ಚವ್ಹಾಣ, ಮಾಜಿ ಶಾಸಕ ರಾಜು ಆಲಗೂರ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಹೆಚ್ಚುವರಿಜಿಲ್ಲಾಧಿಕಾರಿ ರಮೇಶ ಕಳಸದ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಮುಖಂಡರಾದ ಅಡಿವೆಪ್ಪ ಸಾಲಗಲ್‌, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.