ADVERTISEMENT

ದಲಿತರ ಆಶಾಕಿರಣ ಅಂಬೇಡ್ಕರ್‌: ದಲಿತ ಮುಖಂಡ ಗುರು ಚಲವಾದಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 6:48 IST
Last Updated 7 ಡಿಸೆಂಬರ್ 2025, 6:48 IST
ಡಾ. ಬಿ.ಆರ್‌. ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನಾಚರಣೆ ಪ್ರಯುಕ್ತ ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿನ ಅಂಬೇಡ್ಕರ್‌ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಕೆ. ಆನಂದ ಮೊದಲಾದವರು ಪುಷ್ಪಾಂಜಲಿ, ಗೌರವ ನಮನ ಸಲ್ಲಿಸಿದರು
ಡಾ. ಬಿ.ಆರ್‌. ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನಾಚರಣೆ ಪ್ರಯುಕ್ತ ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿನ ಅಂಬೇಡ್ಕರ್‌ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಕೆ. ಆನಂದ ಮೊದಲಾದವರು ಪುಷ್ಪಾಂಜಲಿ, ಗೌರವ ನಮನ ಸಲ್ಲಿಸಿದರು   

ಕೊಲ್ಹಾರ: ‘ಹಿಂದುಳಿದ, ಕೆಳವರ್ಗದ ಜನರು ಅಂಧಕಾರದಲ್ಲಿದ್ದಾಗ ಅವರ ಬದುಕು ಹಸನಾಗಿಸುವ ಸಲುವಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅವರ ಏಳಿಗೆಗಾಗಿ ಮಾರ್ಗ ಕಂಡುಕೊಳ್ಳಲು ಸಂವಿಧಾನ ಎಂಬ ಮಹಾನ್ ಗ್ರಂಥ ನೀಡಿದ ದಲಿತರ ಆಶಾಕಿರಣ ಅಂಬೇಡ್ಕರ್‌’ ಎಂದು ದಲಿತ ಮುಖಂಡರಾದ ಗುರು ಚಲವಾದಿ ಹೇಳಿದರು.

ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಡಾ ಬಿ. ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀಶೈಲ ಚಲವಾದಿ ಮಾತನಾಡಿ, ‘ಅಂಬೇಡ್ಕರ್ ಎಂದರೆ ದಲಿತರ, ಬಡಜನರ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ದೇಶ ಕಟ್ಟಲು ದೇಹ ಸವೆಸಿದ ಮಹಾನ್ ತಪಸ್ವಿ’ ಎಂದರು.

ADVERTISEMENT

ಶ್ರೀಶೈಲ್ ಚಲವಾದಿ, ಕಲ್ಲು ಸೊನ್ನದ, ಬಸವರಾಜ್ ಚಲವಾದಿ, ದಶರಥ ಈಟಿ, ವಿಠ್ಠಲ್ ಆಸಂಗಿ, ವಿಠ್ಠಲ್ ದಿನ್ನಿ, ಅಮೀನಪ್ಪ ತಗ್ಗಿ, ತಿಪ್ಪಣ್ಣ ಕುದುರಿ, ತೌಶೀಪ ಗಿರಗಾಂವಿ, ಇಕ್ಬಾಲ್ ನದಾಫ, ಬಾಬು ಭಜಂತ್ರಿ, ಮಲ್ಲು ಹೆರಕಲ್ ಇದ್ದರು.

ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಗೌರವ ನಮನ

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್ ಕರಡಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಪಾಲಿಕೆ ಸದಸ್ಯೆ ಆರತಿ ಶಹಾಪೂರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ ವಿಜಯಪುರ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಅರವಿಂದ ಲಂಬು ಇದ್ದರು. ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿ ಡಾ.ಬಿ.ಆರ್.ಅಂಬೇಡ್ಕರ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮವನ್ನು ಅಂಬೇಡ್ಕರ್ ಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ ಎಸ್‌ಟಿ ನೌಕರರ ಸಮನ್ವಯ ಸಮಿತಿ ವಿಜಯಪುರ ಜಿಲ್ಲಾ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಚ್. ನಾಡಗೇರಿ ಮಮಾತನಾಡಿದರು. ಬಸವಂತ ಗುಣದಾಳ ಅರವಿಂದ್ ಲಂಬು ಚಂದ್ರಶೇಖರ್ ಚಕ್ರವರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.