ನಿಡಗುಂದಿ: ಡಾ.ಅಂಬೇಡ್ಕರ್ ಜಯಂತ್ಯೋತ್ಸವ ಉತ್ಸವ ಸಮಿತಿ ಆಶ್ರಯದಲ್ಲಿ ಮೇ 10 ರಂದು ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಅಂಗವಾಗಿ ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ, ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಮಿತಿ ಮುಖಂಡ ಶೇಖರ ದೊಡಮನಿ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 10 ರಂದು ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ನಡೆಯಲಿದೆ. ನಿಡಗುಂದಿ ಹಡಗಲಿ ರುದ್ರಮುನಿ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸುವರು. ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು’ ಎಂದು ತಿಳಿಸಿದರು.
ಪ್ರಶಾಂತ ಚಲವಾದಿ ಮಾತನಾಡಿ, ‘ಅಂಬೇಡ್ಕರ್ ಅವರ ಬಗ್ಗೆ ತಾಳಿಕೋಟಿ ಎಸ್.ಕೆ.ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ, ಸಿಂದಗಿ ದಲಿತ ಹೋರಾಟಗಾರ ರಾಜು ಕೂಚಬಾಳ ಉಪನ್ಯಾಸ ನೀಡಲಿದ್ದಾರೆ’ ಎಂದು ತಿಳಿಸಿದರು.
ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳಲು ಬಯಸುವ ವಧು– ವರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊ.ಸಂ. 81050 75432, 95358 76060, 99720 60988 ಸಂಪರ್ಕಿಸಬಹುದು ಎಂದು ತಿಳಿಸಿದರು.
ಸಿಂಧೂರ ಭೈರವಾಡಗಿ, ಕುಮಾರ ಬಾಗೇವಾಡಿ, ಕಾಮಣ್ಣ ಭಜಂತ್ರಿ, ಡೋಂಗ್ರಿ ಭಜಂತ್ರಿ, ಭೀಮಸಿ ಗುಂಡಿನಮನಿ, ರಾಘು ವಡವಡಗಿ, ಬಸವರಾಜ ಆಲಕೊಪ್ಪರ, ಗಿರೀಶ ತಳವಾರ, ಯಲಗೂರೇಶ ಪಾತ್ರದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.