ತಾಂಬಾ: ಸಮೀಪದ ಶಿವಪೂರ ಬಿ.ಕೆ. ಗ್ರಾಮದ ಅಂಗನವಾಡಿ ಮತ್ತು ಸರ್ಕಾರಿ ಕನ್ನಡ ಮಕ್ಕಳ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಿಲಗೊಂಡಿರುವುದರಿಂದ ಯಾವಾಗ ಏನು ಆಗುತ್ತದೆಯೋ ಎಂದು ಶಿಕ್ಷಕರಿಗೆ ತಲೆ ನೋವಾಗಿ ಪರಿಣಮಿಸಿದೆ.
ಹಲವು ವರ್ಷಗಳ ಹಿಂದೆ ಹಳೆಯ ಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದರೂ ಪಕ್ಕದಲ್ಲಿರುವ ಹಳೆಯ ಶಾಲಾ ಕಟ್ಟಡ ತೆರವುಗೊಳಿಸಿಲ್ಲ. ಹೊಸ ಕಟ್ಟಡದಲ್ಲಿ ಶಿಕ್ಷಣ, ಹಳೆಯ ಕಟ್ಟಡದ ಹತ್ತಿರ ಮಕ್ಕಳು ಆಟವಾಡುತ್ತಾರೆ.
ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡ ಬಲಿಗಾಗಿ ಕಾದು ನಿಂತಂತಿದೆ. ಕಟ್ಟಡ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.
ಹಳೆ ಶಾಲಾ ಕಟ್ಟಡ ತೆರವುಗೊಳಿಸಲು ಮೇಲಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ. ಕಟ್ಟಡ ತೆರವುಗೊಳಿಸಲೂ ಹಣವಿಲ್ಲ ಎಂದು ಪ್ರತಿಕ್ರಿಯೆ ನೀಡುತ್ತಾರೆ ಎಂದು ಎಸ್.ಡಿ.ಎಂ.ಸಿ ಸದಸ್ಯರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನಡೆಯುತ್ತಿರುವ ಅಂಗನವಾಡಿ ಕೇಂದ್ರ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಹಲವು ದಿನಗಳಿಂದ ಬೇರೆ ಸ್ಥಳದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭವಾಗಿದೆ. ಬಾಡಿಗೆ ಮನೆ ಮಾಲೀಕರು ಬಿಡು ಎಂದಾಗ ಬಿಡಬೇಕಾದ ಸ್ಥಿತಿ ಇದೆ.
ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು ಹಳೇ ಶಾಲಾ ಕಟ್ಟಡ ತೆರವುಗೊಳಿಸಿ ಸುಂದರವಾದ ಆಟದ ಮೈದಾನ ಮಾಡಬೇಕು ಮತ್ತು ಆಟದ ಸಾಮಗ್ರಿ ಸಿಗುವಂತೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಹಳೇ ಕಟ್ಟಡ ತೆರವು ಸಂಬಂಧ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಕ್ರಿಯಾ ಯೋಜನೆ ಮಾಡಿ ಗಮನಕ್ಕೆ ತರಲಾಗಿದೆ. ಆದೇಶ ಬಂದ ತಕ್ಷಣ ತೆರವು ಮಾಡುತ್ತೇವೆಟಿ.ಎಸ್.ಅಲ್ಗೂರ ಕ್ಷೇತ್ರ ಶಿಕ್ಷಣಾಧಿಕಾರಿ ಇಂಡಿ
ಇಂಡಿ ಪಿಬ್ಲ್ಯುಡಿ ಅಧಿಕಾರಿಗಳಿಗೆ ಕಟ್ಟಡ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಹೇಳಲಾಗಿದೆ. ವರದಿ ಬಂದ ತಕ್ಷಣ ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ.ಬಿ.ಎಸ್.ಗುತ್ತರಗಿಮಠ ಮಹಿಳಾ ಮತ್ತು ಮಕ್ಕಳ ಅಧಿಕಾರಿ ಇಂಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.