ADVERTISEMENT

ವಿಜಯಪುರ: ಅಂಗನವಾಡಿ ನೌಕರಿ ಕಾಯಂಗೆ ಆಗ್ರಹ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 12:10 IST
Last Updated 16 ಆಗಸ್ಟ್ 2021, 12:10 IST
ವಿಜಯಪುರ ಅಂಗನವಾಡಿ ನೌಕರರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಅವರಿಗೆ ಮನವಿ ಸಲ್ಲಿಸಲಾಯಿತು 
ವಿಜಯಪುರ ಅಂಗನವಾಡಿ ನೌಕರರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಅವರಿಗೆ ಮನವಿ ಸಲ್ಲಿಸಲಾಯಿತು    

ವಿಜಯಪುರ:ಅಂಗನವಾಡಿ ನೌಕರರನ್ನು ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸಿಐಟಿಯು ಸಂಯೋಜಿತಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಚವ್ಹಾಣ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸುನಂದಾ ನಾಯಕ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಿಫಾರಸು ಮಾಡಿರುವ ₹ 3.39 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಇಲಾಖೆಯ ಹಿಂದಿನ ಸಚಿವರಿಂದ ಕೋಳಿ ಮೊಟ್ಟೆಯಲ್ಲಿಯಾಗಿರುವ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಕೊರೊನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆ ಕೊಡಬೇಕು. ಅನುಕಂಪದ ಆದರದ ಮೇಲೆ ಕೆಲಸ ಕೊಡುವಾಗ ಮಗಳು ಬದಲಿಗೆ ಕುಟುಂಬ ಎಂದು ಬದಲಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿಪೂರೈಕೆ ಮಾಡಬೇಕು. ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ಮಾಡಿ ಕೋವಿನಿಂದ ನಿಧನರಾದ ಅಂಗನವಾಡಿ ನೌಕರರಿಗೆ ಕೂಡಲೆ ₹ 30 ಲಕ್ಷ ಪರಿಹಾರ ಧನ ಬಿಡುಗಡೆಮಾಡಬೇಕು ಎಂದು ಆಗ್ರಹಿಸಿದರು.

ಕೊರೊನಾ ಸಂದರ್ಭದಲ್ಲಿ ಕೆಲಸ ಒತ್ತಡದಿಂದ ಮೃತರಾದವರಿಗೆ ₹1 ಲಕ್ಷಮರಣ ಪರಿಹಾರ ಕೊಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಬೇಕು. ಐಸಿಡಿಎಸ್ ಕೆಲಸ ಹೊರತು ಪಡಿಸಿ ಉಳಿದ ಕೆಲಸಗಳನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.

2016 ರಿಂದ ನಿವೃತ್ತಿಯಾದ ಸುಮಾರು 7166 ಅಂಗನವಾಡಿ ನೌಕರರಿಗೆ ಬಾಕಿ ಇರುವ ಇಡುಗಂಟು ಕೊಡಬೇಕು. 2015 ರಿಂದ ಹೊಸದಾಗಿ ನೇಮಕವಾದವರಿಗೆ ಎಲ್‍ಐಸಿ ಆಧಾರಿತ ನಿವೃತ್ತಿ ಸೌಲಭ್ಯ ಕೊಡಬೇಕು. ಎನ್‍ಪಿಎಸ್ ಲೈಟ್ ಅನ್ವಯ ಆಗದವರಿಗೆ ₹ 3 ಲಕ್ಷದಿಂದ ₹ 5 ಲಕ್ಷ ಇಡುಗಂಟು ಕೊಡಬೇಕು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಎಲ್‍ಐಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿಷ್ಠ ವೇತನ ಜಾರಿ ಮಾಡಬೇಕು ಎಂದರು.

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಉಪಾಧ್ಯಕ್ಷರಾದ ಭೀಮಶಿ ಕಲಾದಗಿ ಮಾತನಾಡಿ, ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು. ಮಾಡುವ ತನಕ ಕಾರ್ಯಕರ್ತೆಯರಿಗೆ ₹ 30 ಸಾವಿರ ಮತ್ತು ಸಹಾಯಕರಿಗೆ ₹ 21 ಸಾವಿರ ವೇತನ ಕೊಡಬೇಕು ಎಂದು ಒತ್ತಾಯಿಸಿದರು.

ಸೇವಾ ಜೇಷ್ಠತೆ ಆಧಾರದಲ್ಲಿ ವೇತನ ನಿಗದಿ ಮಾಡಿ ಸಹಾಯಕಿಯರ ವೇತನ ಮತ್ತು ಕಾರ್ಯಕರ್ತೆಯರ ವೇತನ ಅಂತರ ಕಡಿಮೆ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ಕೊಡಬೇಕು. ಮುಂಬಡ್ತಿ ವರ್ಗಾವಣೆ ಪೌಷ್ಠಿಕ ಆಹಾರವನ್ನು ಸರಬರಾಜು ಮಾಡುವ ಎಂ.ಎಸ್.ಪಿ.ಟಿ.ಸಿ. ಗಳಲ್ಲಿ ರಾಜಕೀಯ ಮಧ್ಯಪ್ರವೇಶವನ್ನು ತಡೆಯಬೇಕು ಎಂದರು.

ರಾಜ್ಯ ಉಪಾಧ್ಯಕ್ಷರಾದ ಭಾರತಿ ವಾಲಿ, ದಾನಮ್ಮ ಗುಗ್ಗರಿ, ಅಶ್ವಿನಿ ತಳವಾರ, ಸುವರ್ಣಾ ಹಲಗಣಿ, ಸರಸ್ವತಿ ಮಠ, ಶೋಭಾ ಕಬಾಡೆ, ಜಯಶ್ರೀ ಪೂಜಾರಿ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಸುರೇಖಾ ರಜಪುತ, ಶಾಲಿನಿ ಮೊಹಿತೆ, ಫರ್ನಾಜ್‌ ಮುತವಲ್ಲಿ, ಸಂಗೀತಾ ಲೋಕೂರ, ಮಂಜುಳಾ ಪತ್ತಾರ, ಗೀತಾ ಜಾಧವ, ರಾಜೇಶ್ವರಿ ಸಂಕದ, ಎಲ್.ಎಸ್. ಬೋಳ, ಅಮೃತಾ ಕುಲಕರ್ಣಿ, ಟಿ.ಎಸ್. ಬಳಗಾನೂರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.