ADVERTISEMENT

‘ಅಂಕಿತ ಪ್ರಕಾಶನ’ಕ್ಕೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 23:30 IST
Last Updated 20 ಜನವರಿ 2026, 23:30 IST
   

ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ‌ಯು 2026ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ.

ಮಾಜಿ ಸಚಿವ ದಿ. ಎಂ.ಸಿ.ಮನಗೂಳಿ ಸ್ಮರಣಾರ್ಥ ‘ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಗೆ ಬೆಂಗಳೂರಿನ ಅಂಕಿತ ಪುಸ್ತಕ ಪ್ರಕಾಶನ ಆಯ್ಕೆ‌ಯಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ.

‘ಬೆರಗು ಸಮಗ್ರ ಸಾಹಿತ್ಯ’ ಪ್ರಶಸ್ತಿಗೆ ಕಲಬುರಗಿಯ ಹಿರಿಯ‌ ಸಾಹಿತಿ ಶ್ರೀಶೈಲ‌ ನಾಗರಾಳ ಅವರು ಆಯ್ಕೆ ಆಗಿದ್ದು, ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ADVERTISEMENT

‘ಫೆಬ್ರುವರಿ ಮೊದಲವಾರ ಕಡಣಿಯಲ್ಲಿ ನಡೆಯುವ ಬೆರಗು 9ನೇ ವರ್ಷದ ಸಂಭ್ರಮ ಹಾಗೂ 25 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ  ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.