ADVERTISEMENT

ಸಿಂದಗಿ | ಪರೀಕ್ಷೆ ಸಿದ್ಧತೆ: ಮೊಬೈಲ್, ಟಿವಿ ಕಡಿವಾಣಕ್ಕೆ ಇಒಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 3:09 IST
Last Updated 30 ಜನವರಿ 2026, 3:09 IST
   

ಸಿಂದಗಿ: ‘ಸಿಂದಗಿ, ದೇವರಹಿಪ್ಪರಗಿ ಮತ್ತು ಆಲಮೇಲ ತಾಲ್ಲೂಕುಗಳಲ್ಲಿ ನಿತ್ಯ ಸಂಜೆ 7 ರಿಂದ ರಾತ್ರಿ 9ರವರೆಗೆ ಎಲ್ಲ ಗ್ರಾಮಗಳ ಮನೆಗಳಲ್ಲಿನ ಮೊಬೈಲ್ ಮತ್ತು ಟಿವಿಗಳನ್ನು ಬಂದ್ ಮಾಡುವಂತೆ ಡಂಗುರ ಸಾರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದಾರೆ.

‘ಮಕ್ಕಳಲ್ಲಿ ಓದುವ ಅಭಿರುಚಿ ಹೆಚ್ಚಿಸಲು ಮತ್ತು ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಿಸಲು ಈ ಕ್ರಮ ಅಗತ್ಯ. ಮೂರು ತಾಲ್ಲೂಕುಗಳ ಎಲ್ಲ ಗ್ರಾಮಗಳಲ್ಲಿ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ಮಕ್ಕಳಿರುವ ಮನೆಗಳಲ್ಲಿ ಮೊಬೈಲ್ ಮತ್ತು ಟಿವಿ ಬಂದ್ ಮಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಡಂಗುರ ಸಾರಿಸಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT