ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಿಷನ್ ಸಂಯೋಜಕರು ಹಾಗೂ ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರಸಿ ಮತ್ತು ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲಾತಿಗಳೊಂದಿಗೆ ಫೆ.26 ರೊಳಗೆ ಸಲ್ಲಿಸಬೇಕು. ಹುದ್ದೆಗಳಿಗೆ ಸಲ್ಲಿಸಬೇಕಾದ ಅರ್ಹತೆ ನಿಗದಿತ ವಿದ್ಯಾರ್ಹತೆ ಹಾಗೂ ಅನುಭವ, ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿ ದೂ.08352-295353 ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.