ADVERTISEMENT

ಹಂಗಾಮಿ ಕುಲಪತಿಯಾಗಿ ಪ್ರೊ.ಮಲ್ಲಿಕಾರ್ಜುನ ನೇಮಕ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:19 IST
Last Updated 27 ಜೂನ್ 2025, 16:19 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.ಶಾಂತಾದೇವಿ ಟಿ ಮತ್ತು ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ ಇದ್ದಾರೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ನಿಕಾಯದ ಡೀನ್ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹಲೋಟ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ. ಅವರ ಡೀನ್ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ  ಪ್ರೊ.ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ ಜೂನ್‌ 30ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.ಶಾಂತಾದೇವಿ ಟಿ ಮತ್ತು ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.