ADVERTISEMENT

ಪ್ರತಿ ಗ್ರಾ.ಪಂ.ಗೆ ಇಬ್ಬರು ಸಮನ್ವಯಕರ ನೇಮಕ

ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ಬಲ ಪಡಿಸಲು ಕಾಂಗ್ರೆಸ್‌ ಆದ್ಯತೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 13:01 IST
Last Updated 8 ಸೆಪ್ಟೆಂಬರ್ 2021, 13:01 IST

ವಿಜಯಪುರ:ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿಪ್ರತಿ ಗ್ರಾಮ ಪಂಚಾಯ್ತಿಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದು ಸಂಘಟನೆಯ ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯ ವಿ.ವೈ.ಘೋರ್ಪಡೆ ಹೇಳಿದರು.

ನಗರದಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪ್ರತಿ ಬ್ಲಾಕ್‌ಗೆ ಇಬ್ಬರು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಒಬ್ಬರು ಹಾಗೂ ಜಿಲ್ಲೆಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದರು.

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಂಘಟನೆ ಉದ್ದೇಶದಿಂದರಾಜೀವ್ ಗಾಂಧಿ ಪಂಚಾಯತ್‌ ರಾಜ್ ಸಂಘಟನೆಯ (ಆರ್‌ಜಿಪಿಆರ್‌ಎಸ್) ಬಲ ಪಡಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಗ್ರಾಮ ಪಂಚಾಯತ್‌ ವ್ಯವಸ್ಥೆ ಬಲಪಡಿಸುವುದೇ ಸಂಘಟನೆಯ ಧ್ಯೇಯವಾಗಿದೆ ಎಂದರು.

ರಾಜ್ಯ ಹಾಗೂಜಿಲ್ಲಾ ಮಟ್ಟದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಬಲಪಡಿಸಲು ಅಕ್ಟೋಬರ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ನ್ಯಾಯದಡಿಯಲ್ಲಿ ಸರ್ಕಾರದ ಯೋಜನೆಗಳನ್ನು ತಳ ಹಂತದವರೆಗೂ ತಲುಪಿಸಲು ಸಂಘಟನೆ ಶ್ರಮಿಸಲಿದೆ ಅದಕ್ಕಾಗಿ ವಿಭಾಗ ಮಟ್ಟದಲ್ಲಿ ಸಹ ಸಂಚಾಲಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಆರ್‌ಜಿಪಿಆರ್‌ಎಸ್ ರಾಜ್ಯ ಘಟಕದ ಸಮನ್ವಯಕರನ್ನಾಗಿ ವಿಧಾನಪರಿಷತ್ ಸದಸ್ಯ ವಿಜಯ್‌ ಸಿಂಗ್, ಸಹ ಸಂಚಾಲಕರಾಗಿ ಬೆಂಗಳೂರಿನ ಅಂಕಲಿ ನೇಮಕಗೊಂಡಿದ್ದಾರೆ. ಬೆಳಗಾವಿ ವಿಭಾಗಕ್ಕೆ ಉಮೇಶ ಎಸ್.ಬಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಎಐಸಿಸಿಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರನ್ನು ಆಡಳಿತದಲ್ಲಿ ತೊಡಗಿಸಿಕೊಳ್ಳುವಂತೆ ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತ ಈ ಸಂಘಟನೆ ಕಾರ್ಯನಿರ್ವಹಿಸಲಿದೆ ಎಂದರು.

ಸಂಘಟನೆಯ ರಾಜ್ಯ ಉಸ್ತುವಾರಿ ಬಿನಿತಾ ವೋರಾ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ, ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲನಗೌಡ ಬಿರಾದಾರ, ವಿಠಲ ಕಟಕದೊಂಡ, ಗಂಗಾಧರ ಸಂಬಣ್ಣಿ, ವಸಂತ ಹೊನಮೋಡೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.