ಚಡಚಣ: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್.ಸೊನ್ನಗಿ ಹೇಳಿದರು.
ಪಟ್ಟಣದ ಶಿಕ್ಷಕರ ಸೊಸಾಯಿಟಿ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಡಚಣ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಸೊಸಾಯಿಟಿ ಅಧ್ಯಕ್ಷ ಎಸ್.ಎಸ್.ಪಾಟೀಲ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರ ಸಂಘ ದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಮಜ್ಜಗಿ, ಸಂಘದಿಂದ ಕೈಗೊಂಡ ಚಟುವಟಿಕೆಗಳು ಹಾಗೂ ಹೋರಾಟದ ಮಾಹಿತಿ ತಿಳಿಸಿದರು.
ನೌಕರ ಸಂಘದ ಕಾರ್ಯದರ್ಶಿ ವಿಠ್ಠಲ ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸರ್ಕಾರಿ ನೌಕರ ಸಂಘದ ಕಾರ್ಯಕಾರಿ ಸದಸ್ಯರು, ಸದಸ್ಯರು, ರಾಜ್ಯ ಪರಿಷತ್ತು ಸದಸ್ಯರು, ಶಿಕ್ಷಕರ ಸಂಘದ ಕಾರ್ಯಕಾರಿಣಿ ಸದಸ್ಯರು, ಸದಸ್ಯರು, ಶಿಕ್ಷಕರ ಸೊಸಾಯಿಟಿಯ ನಿರ್ದೇಶಕರು ಸೇರಿದಂತೆ ಶಿಕ್ಷಕರು ಇದ್ದರು.
ಶಿಕ್ಷಕ ಗುರು ಜೇವೂರ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.