ADVERTISEMENT

ಅಲಮಟ್ಟಿ ಜಲಾಶಯಕ್ಕೆ ಬಾಗಿನ ಆ.23ಕ್ಕೆ?

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 15:33 IST
Last Updated 18 ಆಗಸ್ಟ್ 2022, 15:33 IST
ಆಲಮಟ್ಟಿ ಜಲಾಶಯ
ಆಲಮಟ್ಟಿ ಜಲಾಶಯ   

ಆಲಮಟ್ಟಿ: ತುಂಬುವ ಹಂತದಲ್ಲಿರುವ ಆಲಮಟ್ಟಿ ಜಲಾಶಯಕ್ಕೆ ಆಗಸ್ಟ್‌ 21 ಅಥವಾ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜಂಟಿಯಾಗಿ ಬಾಗಿನ ಅರ್ಪಿಸುವುದು ಬಹುತೇಕ ಖಚಿತವಾಗಿದೆ.

ಜಲಾಶಯಒಂದೆರಡು ದಿನದಲ್ಲಿ ಭರ್ತಿಯಾಗಲಿದೆ. ಜುಲೈ ಅಂತ್ಯದಲ್ಲಿಯೇ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆದರೆ, ನೆರೆಯ ಆತಂಕದ ಹಿನ್ನಲೆಯಲ್ಲಿ ಜಲಾಶಯ ಭರ್ತಿ ಮಾಡದೇ, ಎರಡು ಮೀಟರ್ ನೀರಿನ ಮಟ್ಟ ಕಡಿಮೆ ಮಾಡಿ ಹೆಚ್ಚುವರಿ ನೀರನ್ನು ನದಿಪಾತ್ರಕ್ಕೆ ಬಿಡಲಾಗಿತ್ತು.

ಸದ್ಯ ನೆರೆಯ ಅತಂಕ ಇಳಿಮುಖವಾಗಿದ್ದರಿಂದ ಜಲಾಶಯದಲ್ಲಿ ಗರಿಷ್ಠ ಮಟ್ಟ 519.60 ಮೀ. ವರೆಗೆ ನೀರು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.

ADVERTISEMENT

ಈಗಾಗಲೇ ಬಾಗಿನ ಅರ್ಪಿಸುವ ಕುರಿತು ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶೀಘ್ರವೇ ಮುಖ್ಯಮಂತ್ರಿಗಳ ಬಾಗಿನ ದಿನ ನಿಗದಿಯಾಗಲಿದೆ ಎಂದು ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದರು.

ಶ್ರಾವಣ ಮಾಸದಲ್ಲೇ ಮುಖ್ಯಮಂತ್ರಿ ಬಾಗಿನ ಅರ್ಪಿಸುವ ಸಾಧ್ಯತೆ ದಟ್ಟವಾಗಿದೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯನ್ನು ಕೆಬಿಜೆಎನ್ ಎಲ್ ಅಧಿಕಾರಿಗಳು ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.