ADVERTISEMENT

ಪ್ರೊ.ಕಸ್ತೂರಿ ರಂಗನ್‌ಗೆ ಭಾಸ್ಕರ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 14:05 IST
Last Updated 25 ಸೆಪ್ಟೆಂಬರ್ 2019, 14:05 IST
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ವತಿಯಿಂದ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಕೆ.ಕಸ್ತೂರಿ ರಂಗನ್ ಅವರಿಗೆ ಬುಧವಾರ ‘ಭಾಸ್ಕರ’ ಪ್ರಶಸ್ತಿ ಪ್ರದಾನ ಮಾಡಲಾಯಿತು
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ವತಿಯಿಂದ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಕೆ.ಕಸ್ತೂರಿ ರಂಗನ್ ಅವರಿಗೆ ಬುಧವಾರ ‘ಭಾಸ್ಕರ’ ಪ್ರಶಸ್ತಿ ಪ್ರದಾನ ಮಾಡಲಾಯಿತು   

ವಿಜಯಪುರ: ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ‘ಭಾಸ್ಕರ’ ಪ್ರಶಸ್ತಿಯನ್ನು ಈ ಬಾರಿ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಕೆ.ಕಸ್ತೂರಿ ರಂಗನ್ ಅವರಿಗೆ ಸಿಂದಗಿ ಪಟ್ಟಣದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.

ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಬೆಳ್ಳಿ ಸ್ಮರಣಿಕೆಯನ್ನು ಒಳಗೊಂಡಿದೆ. ಶ್ರೀಶೈಲ ಪೀಠದ ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಸಾರಂಗಮಠದ ಡಾ.ಪ್ರಭು ಸಾರಂಗದೇವರ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ಇದಕ್ಕೂ ಮುನ್ನ ಕಸ್ತೂರಿರಂಗನ್ ಅವರು ಯುವ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಕೇಳಿ ಬಂದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ವಿದ್ಯಾರ್ಥಿಗಳ ಕೌತುಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.