
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಸೋಲಾಪುರ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು-ಬದಲು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆಯುವ ಸಲುವಾಗಿ ಸರ್ಕಾರಿ ಆಸ್ಪತ್ರೆಗೆ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
ಡಾ. ವಿದ್ಯಾ ತಿರಾಣಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದೆ. ಸಿವಿಲ್ ಆಸ್ಪತ್ರೆಯಲ್ಲಿ ಪ್ರಸವವಾದ ಶಿಶುವಿನ ಅದಲು- ಬದಲು ಕುರಿತು ಬಂಧುಗಳು ದೂರು ನೀಡಿದ್ದರು. ಈ ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟು ಪೊಲೀಸರು ಸಹ ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ದಿನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೋಷಕರು ಡಿಎನ್‌ಎ ಪರೀಕ್ಷೆಗಾಗಿ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಲ್ಲಿಸಿದ್ದಾರೆ.
ಶಿಶು ಬದಲಾವಣೆ ಘಟನೆಯ ಹಿನ್ನೆಲೆಯಲ್ಲಿ ಡೀನ್ ಡಾ. ಋತ್ವಿಕ್ ಜಯ್ಕರ್ ಅವರು ‘ಬಿ’ ಬ್ಲಾಕ್‌ನ ಸಂಪೂರ್ಣ ತಪಾಸಣೆ ನಡೆಸಿದರು. ಈ ವೇಳೆ ಅವರು ಶೌಚಾಲಯಗಳನ್ನೂ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಇರುವ ಅಸ್ವಚ್ಛತೆ, ರೋಗಿಗಳಿಗೆ ನೀಡಲಾಗುವ ಸೇವೆಯ ಗುಣಮಟ್ಟ ಉತ್ತಮವಾಗಿರಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೊತೆಗೆ, ನೀರಿನ ಸೌಲಭ್ಯ ಇರದ ಸ್ಥಳಗಳಲ್ಲಿ ಸ್ವಚ್ಛ ನೀರಿನ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.
ತನಿಖೆ ನಿಧಾನಗತಿಯಲ್ಲಿದೆ, ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಬಂಧುಗಳು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.