ಕೆರೂರ (ಬಾಗಲಕೋಟೆ ಜಿಲ್ಲೆ): ‘ಸಮೀಪದ ಹೂಲಗೇರಿ ಗ್ರಾಮದ ಬಳಿ ಭಾನುವಾರ ಕೆಎಸ್ಆರ್‌ಟಿಸಿ ಬಸ್ - ಇನ್ನೊವಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಾಗರ ತೆಕ್ಕೆನ್ನವರ (64) ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಬೀಳಗಿ ತಾಲ್ಲೂಕಿನ ನಾಗರಾಳ ಗ್ರಾಮದ ಸಾಗರ ತೆಕ್ಕೆನ್ನವರ, ವೈಯಕ್ತಿಕ ಕೆಲಸದ ನಿಮಿತ್ತ ಕೆರೂರ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಕಾರು ನಜ್ಜುಗುಜ್ಜಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಮೃತ ದೇಹವನ್ನು ಕಾರಿನಿಂದ ಹೊರ ತೆಗೆಯಲಾಯಿತು. ಘಟನೆಯಲ್ಲಿ ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆರೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.