ADVERTISEMENT

ವಿಜಯಪುರ | ಗುಮ್ಮಟನಗರಿಯಲ್ಲಿ ಬಕ್ರೀದ್‌ ಆಚರಣೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 8:17 IST
Last Updated 1 ಆಗಸ್ಟ್ 2020, 8:17 IST
   

ವಿಜಯಪುರ: ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಅನ್ನು ಶನಿವಾರ ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶ್ರದ್ಧೆ– ಭಕ್ತಿಯಿಂದ ಆಚರಿಸಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಗೆ ನಿರ್ಬಂಧವಿದ್ದ ಕಾರಣ ಮಸೀದಿಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ಬೆರಳೆಣಿಕೆ ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಿದರು.

ಬಹುತೇಕ ಮುಸ್ಲಿಮರು ತಮ್ಮ ತಮ್ಮ ಬಡಾವಣೆಗಳಲ್ಲಿನ ಮಸೀದಿಗಳಲ್ಲಿ ಬೆಳಿಗ್ಗೆ 6ರಿಂದ 9ರ ಅವಧಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಮಸೀದಿಯೊಳಗೆ ಒಮ್ಮಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ಮಸೀದಿ ಹೊರಗಡೆ ಮುಸ್ಲಿಮರು ಸರದಿಯಲ್ಲಿ ಕಾಯುವಂತಾಯಿತು.

ADVERTISEMENT

ಆರಂಭದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿ, ಸ್ಯಾನಿಟೈಸ್‌ ಹಚ್ಚಲಾಯಿತು. ಮಾಸ್ಕ್‌ ಧರಿಸಿದವರನ್ನು ಮಾತ್ರ ಪ್ರಾರ್ಥನೆಗೆ ಬಿಡಲಾಯಿತು. ಎಲ್ಲ ಸಿದ್ಧತೆಗಳನ್ನು ಆಯಾ ಮಸೀದಿಯ ನಿರ್ವಹಣಾ ಸಮಿತಿಗೆ ವಹಿಸಲಾಗಿತ್ತು.

ನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಗೆ ನಿಷೇಧವಿದ್ದ ಕಾರಣ, ಈ ಬಾರಿ ಎಲ್ಲ ಕಡೆ ಪೊಲೀಸ್‌ ಕಾವಲು ಇತ್ತು

ಹೊಸ ಉಡುಗೆ ತೊಟ್ಟು ಬಂದ ಮಕ್ಕಳು, ಹಿರಿಯರು, ಪರಸ್ಪರ ಆಲಿಂಗಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಬಹುತೇಕ ಮುಸ್ಲಿಮರುತಮ್ಮ ತಮ್ಮ ಮನೆಗಳಲ್ಲೇ ನಮಾಜ್‌ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.