ADVERTISEMENT

ಬಕ್ರೀದ್‌: ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 14:09 IST
Last Updated 28 ಜುಲೈ 2020, 14:09 IST

ವಿಜಯಪುರ: ಆಗಸ್ಟ್ 1ರಂದು ಆಚರಿಸುವ ಬಕ್ರೀದ್ ಸಂದರ್ಭದಲ್ಲಿ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.

ಬಕ್ರೀದ್ ದಿನದಂದು ಆಯಾ ಮಸೀದಿಗಳಲ್ಲಿ ಗರಿಷ್ಠ 50 ಜನ ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು. ಒಂದು ವೇಳೆ ಅಧಿಕ ಜನ ಆಗಮಿಸಿದ್ದಲ್ಲಿ ಎರಡು, ಮೂರು ಬ್ಯಾಚ್‍ಗಳಲ್ಲಿ ನಮಾಜ್ ನಿರ್ವಹಿಸಬಹುದು ಎಂದು ಅವರು ಸೂಚಿಸಿದರು.

ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ ಎಂದು ಅವರು ಆದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.