ADVERTISEMENT

ಬಾಲ್ ಬ್ಯಾಡ್ಮಿಂಟನ್: ಮಹಿಳಾ ವಿ.ವಿ ಪ್ರಥಮ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 5:11 IST
Last Updated 13 ಫೆಬ್ರುವರಿ 2026, 5:11 IST
ವಿಜಯಪುರದಲ್ಲಿ ನಡೆದ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡಗಳಿಗೆ ಬಹುಮಾನ ವಿತರಿಸಲಾಯಿತು
ವಿಜಯಪುರದಲ್ಲಿ ನಡೆದ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡಗಳಿಗೆ ಬಹುಮಾನ ವಿತರಿಸಲಾಯಿತು   

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2025–26ನೇ ಸಾಲಿನ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡವು ಪ್ರಥಮ ಸ್ಥಾನ ಗಳಿಸಿದೆ.

ಮಹಿಳಾ ವಿ.ವಿಯ ಜ್ಞಾನಶಕ್ತಿ ಆವರಣದಲ್ಲಿ ಇತ್ತೀಚೆಗೆ ನಡೆದ ಸ್ಪರ್ಧೆಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದವು.

ಅಂತಿಮ ಪಂದ್ಯದಲ್ಲಿ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡ ಹಾಗೂ ರಾಣೆಬೆನ್ನೂರಿನ ಕೆ.ಎಲ್.ಇ. ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯದ ತಂಡ ಮುಖಾಮುಖಿಯಾಗಿದ್ದವು.

ADVERTISEMENT

ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣನವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಬಹುಮಾನಗಳನ್ನು ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.