ADVERTISEMENT

ಪ್ಲಾಸ್ಟಿಕ್ ಧ್ವಜ ಮಾರಾಟ, ಬಳಕೆಗೆ ನಿರ್ಬಂಧ

ಸ್ವಾತಂತ್ರ್ಯ ದಿನ ಅರ್ಥಪೂರ್ಣ ಆಚರಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 15:52 IST
Last Updated 2 ಆಗಸ್ಟ್ 2024, 15:52 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಭಾಗವಹಿಸಿದ್ದರು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಭಾಗವಹಿಸಿದ್ದರು   

ವಿಜಯಪುರ: ಆಗಸ್ಟ್ 15ರಂದು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಹಾಗೂ ಬಳಸದಂತೆ ತಿಳಿಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು ಎಂದರು.

ADVERTISEMENT

ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಬಹು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವ್ವಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಬಸವರಾಜ ಕುಂಬಾರ, ಪ್ರಾದೇಶಿಕ ಅರಣ್ಯ ವಿಭಾಗದ ಉಪಸಂರಕ್ಷಣಾಧಿಕಾರಿ ಶಿವಶರಣಯ್ಯ ಕೆ., ಪ್ರಾದೇಶಿಕ ಸಾರಿಗೆಯ ಅಧಿಕಾರಿ ಆನಂದ ಪಾರ್ಥನಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿಕ್ಷಾಣಧಿಕಾರಿ ಅಶೋಕ ಲಿಮಕರ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳಾದ ಅಡಿವೆಪ್ಪ ಸಾಲಗಲ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೆರೆಕರ, ಗಿರೀಶ ಕುಲಕರ್ಣಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.