ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿದರು. ಸಿಹಿ ಹಂಚಿ ಸಂಭ್ರಮಿಸಿದರು.
‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣ ಶೆಟ್ಟಿ, ಯತ್ನಾಳ ಉಚ್ಛಾಟನೆ ಮಾಡಿರುವ ಪಕ್ಷದ ಕ್ರಮವನ್ನು ಸ್ವಾಗತಿಸುತ್ತೇನೆ ಎಂದರು.
ಈ ಮೊದಲೇ ಈ ಕೆಲಸ ಆಗಬೇಕಿತ್ತು. ಕಳೆದ 10 ವರ್ಷಗಳಿಂದ ಪಕ್ಷವನ್ನು, ನಾಯಕರನ್ನು ಸುಸ್ತು ಮಾಡಿ, ಮುಜುಗರನ್ನು ಈಡುಮಾಡಿದ್ದರು. ಅವರ ಉಚ್ಚಾಟನೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.