ADVERTISEMENT

ಕನೇರಿ ಶ್ರೀಗಳ ನಿರ್ಬಂಧ ಹಿಂಪಡೆಯದಿದ್ದರೆ ವಿಜಯಪುರ ಬಂದ್: ಯತ್ನಾಳ 

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 16:08 IST
Last Updated 16 ಅಕ್ಟೋಬರ್ 2025, 16:08 IST
   

ವಿಜಯಪುರ: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರ ಜಿಲ್ಲೆಗೆ ಬರದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ  ಎಚ್ಚರಿಸಿದ್ದಾರೆ.

ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.  

ಪ್ರಜೆಗಳ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.  ಪೊಲೀಸರನ್ನು, ಜಿಲ್ಲಾಡಳಿತವನ್ನು ಉಪಯೋಗಿಸಿಕೊಂಡು ವಾಕ್ ಸ್ವಾತಂತ್ರ್ಯಹರಣ ಮಾಡುತ್ತಿರುವುದು ಹೇಯ ಹಾಗೂ ಖಂಡನೀಯ. ಇದು ಪ್ರಜಾಪ್ರಭುತ್ವದ ಅಣಕ ಎಂದರೆ ತಪ್ಪಾಗಲಾರದು. ಸರ್ಕಾರ ಕೂಡಲೇ ಈ ನಿಷೇಧವನ್ನು ವಾಪಾಸ್ ಪಡೆಯಬೇಕು ಈ ರೀತಿಯಾದ ನಿರಂಕುಶ ಧೋರಣೆಯನ್ನು ಕೂಡಲೇ ಕೈಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.