ADVERTISEMENT

ವಿಜಯಪುರ | ಸಾರ್ವಜನಿಕ ಸ್ಥಳದಲ್ಲಿ ನಮಾಜ್‌ಗೆ ಅವಕಾಶ ಬೇಡ: ಯತ್ನಾಳ

ಮುಖ್ಯಮಂತ್ರಿಗೆ ಪತ್ರ ಬರೆದ ಶಾಸಕ ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 23:10 IST
Last Updated 17 ಅಕ್ಟೋಬರ್ 2025, 23:10 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ‘ಸರ್ಕಾರದ ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು. ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಕೂಡಲೇ ಕ್ರಮ ಕೈಗೊಳ್ಳಲಿ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವ‌ರಿಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ಸಾರ್ವಜನಿಕ ಸ್ಥಳಗಳನ್ನು ಖಾಸಗಿ, ಸಾಂಸ್ಥಿಕ ಉದ್ದೇಶಗಳಿಗೆ ಬಳಸುವುದನ್ನು ನಿರ್ಬಂಧಿಸುವಲ್ಲಿ ನ್ಯಾಯಸಮ್ಮತದ ಒಂದೇ ತತ್ವವನ್ನು ಏಕರೂಪವಾಗಿ ಜಾರಿಗೊಳಿಸುವುದು ಅತ್ಯಗತ್ಯ’ ಎಂದು ಹೇಳಿದ್ದಾರೆ.

‘ಸಾರ್ವಜನಿಕ ರಸ್ತೆಗಳು ಮತ್ತು ಸರ್ಕಾರಿ ಆವರಣದಲ್ಲಿ ನಮಾಜ್ ಮಾಡುವುದರಿಂದ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡ್ಡಿ ಆಗಲಿದೆ. ಹೀಗಾಗಿ,ಅವಕಾಶ ನೀಡಬಾರದು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.