ಬಸವನಬಾಗೇವಾಡಿ: ಇಲ್ಲಿನ ಬಸವ ಜನ್ಮಭೂಮಿ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ರಾಷ್ಟ್ರಮಟ್ಟದ ‘ಬಸವವಿಭೂಷಣ’ ಪ್ರಶಸ್ತಿಗೆ ತಾಲ್ಲೂಕಿನ ಮನಗೂಳಿ ಪಟ್ಟಣದ ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಸೋಮನಗೌಡ (ಅಪ್ಪುಗೌಡ) ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
ಅಪ್ಪುಗೌಡರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ಎರಡನೇ ವಾರದಲ್ಲಿ ಜರುಗಲಿರುವ ಪ್ರತಿಷ್ಠಾನದ 15ನೇ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ವಚನ ವೈಭವ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ, ಸಾಹಿತಿ ಮುರುಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.