ಬಸವನಬಾಗೇವಾಡಿ: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಮೇಲಿಂದ ಬಿದ್ದು ತಾಲ್ಲೂಕಿನ ಕಣಕಾಲ ಮಾದರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ವಾಸುದೇವ ಹಂಚಾಟೆ (47) ಮೃತಪಟ್ಟ ಘಟನೆ ಗುರುವಾರ ತಾಲ್ಲೂಕಿನ ಅಂಬಳನೂರ ಕ್ರಾಸ್ ಬಳಿ ನಡೆದಿದೆ.
ಮೃತ ಶಿಕ್ಷಕ ಬಸವನಬಾಗೇವಾಡಿ ನಿವಾಸಿ.
ನಿತ್ಯದಂತೆ ಶಾಲೆಗೆ ಹೊರಟಿದ್ದ ಶಿಕ್ಷಕನ ಬೈಕ್‌ಗೆ ಅಡ್ಡವಾಗಿ ನಾಯಿ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ತೀವ್ರವಾಗಿ ಗಾಯಗೊಂಡಿದ್ದ ಅವರು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು.
ಅವರಿಗೆ ಪತ್ನಿ, ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.