ಚಡಚಣ: ‘ಸಾಮಾಜಿಕ ಸಮಾನತೆ, ಭ್ರಾತೃತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕ ಅನುಕರಣೀಯ’ ಎಂದು ತಹಶೀಲ್ದಾರ್ ಸಂಜಯ ಇಂಗಳೆ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ಥಳೀಯ ವಿರಕ್ತಮಠದ ಷಡಕ್ಷರಿ ಶಿವಾಚಾರ್ಯ ಮಾತನಾಡಿ, ‘12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಜಾತಿ ಪದ್ಧತಿ ತೊಲಗಿಸಲು ಶ್ರಮಿಸಿದ ಅವರ ವಚನಗಳು ನಮಗೆ ದಾರಿ ದೀಪವಾಗಿವೆ’ ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಲ್ಲು ಧೋತ್ರೆ, ಉಪಾಧ್ಯಕ್ಷ ಇಲಾಯಿ ನದಾಫ್, ಮುಖಂಡರಾದ ದೇವಪ್ಪಗೌಡ ಪಾಟೀಲ, ಯೂನೂಸ್ ಅಲಿ ಮಕಾನದಾರ, ಭೀಮಾಶಂಕರ ವಾಳಿಖಿಂಡಿ, ಮಹಾಂತ್ಯ ಹಿರೇಮಠ, ಶಿಕ್ಷಕರ ಸೋಸಾಯಿಟಿ ಅಧ್ಯಕ್ಷ ಎಸ್.ಎಸ್.ಪಾಟೀಲ, ಸಂತೋಷ ಒಣಕುದರೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.