
ವಿಜಯಪುರ: ‘ಕೇಂದ್ರ ಸರ್ಕಾರವು ಪೂರಕ ಬಜೆಟ್‌ನಲ್ಲಿಯಾದರೂ ಬೆಂಗಳೂರು–ಪುಣೆ–ಮುಂಬೈ ರೈಲ್ವೆ ಕಾರಿಡಾರ್ ಘೋಷಿಸಬೇಕು’ ಎಂದು ಒತ್ತಾಯಿಸಿ ಜನಜಾಗೃತಿ ಆಂದೋಲನ ಮಾಡಲಾಗುವುದು’ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಇಲ್ಲಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಬೆಂಗಳೂರು–ಹೈದರಾಬಾದ್, ಬೆಂಗಳೂರು–ಚೆನ್ನೈ ಹೈಸ್ಪೀಡ್ ರೈಲು ಘೋಷಣೆ ಸ್ವಾಗತಾರ್ಹ. ಜತೆಗೆ ಬೆಂಗಳೂರು-ಪುಣೆ–ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಕೂಡಾ ಅಗತ್ಯವಾಗಿತ್ತು’ ಎಂದು ಪ್ರತಿಪಾದಿಸಿದರು.
‘ಕರ್ನಾಟಕ, ಮಹಾರಾಷ್ಟ್ರದ ಸಂಸದರು ಇದಕ್ಕಾಗಿ ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ಈ ಕಾರಿಡಾರ್ ಆಗಿದ್ದರೆ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರಕ್ಕೂ ಹೆಚ್ಚು ಅನುಕೂಲವಾಗುತ್ತಿತ್ತು’ ಎಂದು ಹೇಳಿದರು.
‘ಕೇಂದ್ರದಲ್ಲಿ ಪ್ರಭಾವಿ ಸಚಿವ ಎಂದು ಬಿಂಬಿಸಿಕೊಂಡಿರುವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ವೈಫಲ್ಯ ಈ ವಿಷಯದಲ್ಲಿ ಎದ್ದು ಕಾಣುತ್ತಿದೆ. ರಾಜ್ಯದ ಬಿಜೆಪಿ ಸಂಸದರಿಂದಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.