ADVERTISEMENT

ಪ್ರವಾಹ ಹಿನ್ನೆಲೆ: ವಿಜಯಪುರ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 8:36 IST
Last Updated 17 ಅಕ್ಟೋಬರ್ 2020, 8:36 IST
ವಿಜಯಪುರ ಜಿಲ್ಲೆಯಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌ ತಂಡ
ವಿಜಯಪುರ ಜಿಲ್ಲೆಯಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌ ತಂಡ   

ವಿಜಯಪುರ: ಕಲಬುರ್ಗಿ ಜಿಲ್ಲೆಯ ಸೊನ್ನಾ ಬ್ಯಾರೇಜ್‌ನಿಂದ 7.8 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರವಾಹ ಹೆಚ್ಚಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲೆಗೆ ಎರಡು ಎನ್‌ಡಿಆರ್‌ಎಫ್‌ ತಂಡಗಳು ಬಂದಿವೆ.

ತಲಾ 18 ಜನರಿರುವ ಎನ್‌ಡಿಆರ್‌ಎಫ್‌ ತಂಡದೊಂದಿಗೆ ಎರಡು ಬೋಟ್‌ಗಳಿವೆ.

ಜಲಾವೃತವಾಗಿರುವ ತಾರಾಪುರ ಗ್ರಾಮದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.

ADVERTISEMENT

ಸಿಂದಗಿ ತಾಲೂಕಿನ ದೇವಣಗಾಂವ, ಕಡ್ಲೇವಾಡ, ಬ್ಯಾಡಗಿಹಾಳ, ಶಂಬೇವಾಡ, ಕುಮಸಗಿ, ಗ್ರಾಮವನ್ನು ಭೀಮಾ ನದಿ ಸುತ್ತು ವರೆದಿದೆ.

ದೇವಣಗಾಂವ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಿದೆ.

ಗ್ರಾಮವನ್ನು ಸುತ್ತು ವರೆದಿರುವ ಪ್ರವಾಹ ಜನರಲ್ಲಿ ಆತಂಕ ಮೂಡಿಸಿದೆ.

ಬಸ್ ನಿಲ್ದಾಣದ ಸಮೀಪದ ಹನುಮಾನ ದೇವಸ್ಥಾನ , ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತ , ಕನಕದಾಸ ವೃತ್ತ ನೀರಿನಿಂದ ಆವೃತವಾಗಿವೆ.

300 ಕ್ಕೂ ಹೆಚ್ಚು ಮನೆಗಳಿ ನೀರು ನುಗ್ಗಿದೆ. ಮುಖ್ಯ ವ್ಯಾಪಾರ ಕೇಂದ್ರ ಆಗಿರುವ ಬಸ್ ನಿಲ್ದಾಣ ಬಸವೇಶ್ವರ ವೃತ್ತದಲ್ಲಿ ಅಂಗಡಿ, ಹೋಟೆಲ್‌ಗಳಲ್ಲಿ ನೀರು ಏಕಾಏಕಿ ನುಗ್ಗಿದ ಪರಿಣಾಮ ವ್ಯಾಪಾರಿಗಳು ಪರದಾಡುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.