ADVERTISEMENT

ಸಂಚಾರ ನಿಯಮ ಜಾಗೃತಿ: ಬಸವನಬಾಗೇವಾಡಿಯಲ್ಲಿ ಬೈಕ್‌ ಜಾಥಾ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 4:25 IST
Last Updated 13 ಜನವರಿ 2026, 4:25 IST
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬಸವನಬಾಗೇವಾಡಿ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ಬೃಹತ್ ಬೈಕ್‌ ರ‍್ಯಾಲಿಗೆ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ ಹಾಜರಿದ್ದರು
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬಸವನಬಾಗೇವಾಡಿ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ಬೃಹತ್ ಬೈಕ್‌ ರ‍್ಯಾಲಿಗೆ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ ಹಾಜರಿದ್ದರು   

ಬಸವನಬಾಗೇವಾಡಿ: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬಸವನಬಾಗೇವಾಡಿ ಪೊಲೀಸ್ ಠಾಣೆಯಿಂದ ಸಂಚಾರ ನಿಯಮಗಳ ಪಾಲನೆ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸಲು ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಬೈಕ್‌ ರ‍್ಯಾಲಿಗೆ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ ಗುರುಶಾಂತ ದಾಶ್ಯಾಳ ನೇತೃತ್ವ ವಹಿಸಿದ್ದರು.

ಜಾಥಾ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭವಾಗಿ ಬಸವೇಶ್ವರ ವೃತ್ತ, ಬಸ್ ನಿಲ್ದಾಣದವರೆಗೂ‌ ಸಾಗಿ ಮರಳಿ‌ ಬಸವೇಶ್ವರ ವೃತ್ತ, ರಾಣಿ‌ ಚೆನ್ನಮ್ಮ ವೃತ್ತ, ಅರಳಿಕಟ್ಟೆ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿಯವರೆಗೂ ಸಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಅಂತ್ಯಗೊಂಡಿತು.

ADVERTISEMENT

ರ‍್ಯಾಲಿಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ನೂರಾರು ಯುವಕರು, ಸಂಘಸಂಸ್ಥೆಗಳ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಹೆಲ್ಮೆಟ್ ಧರಿಸಿ ಭಾಗಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.