ADVERTISEMENT

ವಿಜಯಪುರ: ಬೈಕ್‌, ಮೊಬೈಲ್‌ ಕಳ್ಳನ ಬಂಧನ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 15:59 IST
Last Updated 13 ಜೂನ್ 2020, 15:59 IST
ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಶನಿವಾರ ಬಂಧಿಸಿರುವ ಬೈಕ್‌ ಮತ್ತು ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿ
ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಶನಿವಾರ ಬಂಧಿಸಿರುವ ಬೈಕ್‌ ಮತ್ತು ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿ   

ವಿಜಯಪುರ: ನಗರದಲ್ಲಿ ಬೈಕ್‌ ಮತ್ತು ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿಯನ್ನು ಗ್ರಾಮೀಣ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಜಮಖಂಡಿ ನಿವಾಸಿ ಇಮ್ರಾನ್‌ ಮೆಹಬೂಬ ಕಾಟಿಕ್‌(28) ಬಂಧಿತ ಆರೋಪಿಯಾಗಿದ್ದಾನೆ. ಈತನು ಶನಿವಾರ ನಗರ ಸಮೀಪದ ಮಹಲ್‌ ಐನಾಪುರದ ಬಳಿ ಅಡ್ಡಾಡುತ್ತಿರುವಾಗ ಪೊಲೀಸರು ಅನುಮಾನ ಬಂದು ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾನೆ.

ಬಂಧಿತ ಆರೋಪಿಯಿಂದ ಸುಮಾರು ₹ 50 ಸಾವಿರ ಮೊತ್ತದ ವಿವಿಧ ಕಂಪನಿಗಳ ಒಟ್ಟು ನಾಲ್ಕು ಮೊಬೈಲ್‌ ಸೆಟ್‌ಗಳು ಹಾಗೂ ₹ 1ಲಕ್ಷ ಮೊತ್ತದ ಐದು ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ADVERTISEMENT

ಗ್ರಾಮೀಣ ವಿಭಾಗದ ಸಿಪಿಐ ಎಂ.ಕೆ.ದಾಮಣ್ಣವರ, ಪಿಎಸ್‌ಐ ಆನಂದ ಠಕ್ಕನ್ನವರ, ಆರ್‌.ಎ.ದಿನ್ನಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.