ADVERTISEMENT

ರಮೇಶ ಜಿಗಜಿಣಗಿ ಒಟ್ಟು ಆಸ್ತಿ ಮೌಲ್ಯ ₹51.63 ಕೋಟಿ, ಸಾಲ ₹6.81 ಕೋಟಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 15:40 IST
Last Updated 16 ಏಪ್ರಿಲ್ 2024, 15:40 IST
ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ   

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಸಲ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಬಳಿ ₹51.63 ಕೋಟಿ ಆಸ್ತಿ ಇದೆ. 2019ರಲ್ಲಿ ಇವರ ಒಟ್ಟು ಆಸ್ತಿ ₹ 50.41 ಕೋಟಿ ಇತ್ತು. ಅವರು 10 ತೊಲ ಚಿನ್ನ ಮತ್ತು 3 ಕೆಜಿ ಬೆಳ್ಳಿ ಹೊಂದಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಮೂರು ಸಲ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರದಿಂದ ಮೂರು ಸಲ ಸೇರಿ ಈವರೆಗೆ ಆರು ಬಾರಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿರುವ ರಮೇಶ ಜಿಗಜಿಣಗಿ ಏಳನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಮೋದಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT