ADVERTISEMENT

ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಅವನತಿ; ಡಿ.ಕೆ. ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 13:46 IST
Last Updated 17 ಅಕ್ಟೋಬರ್ 2021, 13:46 IST
ಆಲಮೇಲ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಮುಖಂಡರು ತೆರೆದ ವಾಹನದಲ್ಲಿ ರೋಡ ಶೋ ಮೂಲಕ ಮತ ಯಾಚಿಸಿದರು.
ಆಲಮೇಲ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಮುಖಂಡರು ತೆರೆದ ವಾಹನದಲ್ಲಿ ರೋಡ ಶೋ ಮೂಲಕ ಮತ ಯಾಚಿಸಿದರು.   

ಆಲಮೇಲ(ವಿಜಯಪುರ): ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲುವ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಪರಿವರ್ತನೆಯ ಸಂದೇಶ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಅಂಗವಾಗಿ ಪಟ್ಟಣದಲ್ಲಿ ತೆರೆದ ವಾಹನದಲ್ಲಿ ರೋಡ್‌ ಶೋ ಮೂಲಕ ಮತ ಯಾಚಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ಬಿಜೆಪಿ ಸರ್ಕಾರವೇ ಇದೆ. ಬೀದಿ ವ್ಯಾಪಾರಿಗಳಿಗೆ, ಬಡ ಕೂಲಿ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದ ಇಂತಹ ಸರ್ಕಾರಕ್ಕೆ ಮತ ನೀಡಬೇಡಿ. ಬಿಜೆಪಿ ಸರ್ಕಾರ ಬಡವರ ಏಳಿಗೆಗಿಂತಲೂ ಶ್ರೀಮಂತರಿಗೆ ಸಹಾಯ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿಯ ಅಂತ್ಯ ಈ ಉಪ ಚುನಾವಣೆ ಬಳಿಕ ಆರಂಭಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಬಸವನಬಗೇವಾಡಿ ಶಾಸಕ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಯಂತರಾಯಗೌಡ ಪಾಟೀಲ, ಜೇವರ್ಗಿ ಶಾಸಕ ಅಜಯ್‌ ಸಿಂಗ್‌, ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ ದೇವರಮನಿ, ಎಂ.ಆರ್. ತಾಂಬೋಳಿ, ಸಾದಿಕ ಸುಂಬಡ, ಮುನ್ನಾ ತಾಂಬೋಳಿ, ಅಶೋಕ ಕೊಳಾರಿ, ಪ್ರಭು ವಾಲೀಕಾರ, ಬಸವರಾಜ ತೆಲ್ಲೂರ, ನಜೀರ ಆಲಗೂರ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.