ADVERTISEMENT

ಬಿ.ಎಲ್.ಡಿ.ಇ ಆಸ್ಪತ್ರೆ: ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್

​ಪ್ರಜಾವಾಣಿ ವಾರ್ತೆ
Published 20 ಮೇ 2021, 11:11 IST
Last Updated 20 ಮೇ 2021, 11:11 IST
ಡಾ.ಆರ್‌.ಎಸ್‌.ಮುಧೋಳ
ಡಾ.ಆರ್‌.ಎಸ್‌.ಮುಧೋಳ   

ವಿಜಯಪುರ: ಕೊರೊನಾ ಕಾಯಿಲೆಗೆ ತುತ್ತಾಗಿ ಗುಣಮುಖರಾಗಿದ್ದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುವ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಕಾಯಿಲೆಯ ಚಿಕಿತ್ಸೆಗಾಗಿ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಆರ್.ಎಸ್.ಮುಧೋಳ ಹೇಳಿದ್ದಾರೆ.

ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಹಾಗೂ ಕಲಬುರ್ಗಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 25 ರೋಗಿಗಳು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸದ್ಯ ಮೂವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಗುರುವಾರ ಆರು ಜನರಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಔಷಧ ಪೂರೈಕೆ ಆಗುತ್ತಿಲ್ಲ

ADVERTISEMENT

ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಆಂಪೊಟೆರಿಸಿನ್ ಔಷಧ ಪೂರೈಕೆ ಸರ್ಕಾರದ ನಿಯಂತ್ರಣದಲ್ಲಿದ್ದು, ಅಗತ್ಯ ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಈ ಔಷಧವನ್ನು ಪೂರೈಸಿದರೆ, ಚಿಕಿತ್ಸೆ ಪರಿಣಾಮಕಾರಿಯಾಗಿ ಒದಗಿಸಲು ಸಹಕಾರಿಯಾಗುತ್ತದೆ ಎಂದು ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಪ್ರಾಚಾರ್ಯ ಡಾ.ಅರವಿಂದ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.