
ವಿಜಯಪುರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಡಾ. ಯಶ ಆರ್ಯ ಅವರಿಗೆ ಐದು ಚಿನ್ನದ ಪದಕ ಮತ್ತು ನಗದು ಪರಸ್ಕಾರವನ್ನು ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ ಪ್ರದಾನ ಮಾಡಿದರು.
ವಿಜಯಪುರ: ಇಲ್ಲಿನ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 13ನೇ ಘಟಿಕೋತ್ಸವದಲ್ಲಿ ಒಟ್ಟು 502 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಯಿತು.
11 ಪಿಎಚ್.ಡಿ, 3 ಎಂ.ಸಿಎಚ್(ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್‌ಗಳು, 156 ಎಂಬಿಬಿಎಸ್ ಪದವಿಗಳು ಇದರಲ್ಲಿ ಸೇರಿದ್ದವು.
ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿ ಅಧ್ಯಕ್ಷ ಡಾ.ಎಂ.ಕೆ.ರಮೇಶ ಅವರು ಘಟಿಕೋತ್ಸವ ಭಾಷಣ ಮಾಡಿದರು.
‘ದೇಶದಲ್ಲಿ ವೈದ್ಯಕೀಯ ಸೇವೆ ಹೊಸ ಮಜಲು ತಲುಪಿದೆ. ಗುಣಮಟ್ಟದ ಸೇವೆ ನೀಡಲು ಆಧುನಿಕ ತಂತ್ರಜ್ಞಾನದ ಸದ್ಬಳಕೆ ಆಗುತ್ತಿದೆ. ಟೆಲಿಮೆಡಿಸಿನ್ ಮೂಲಕವೂ ಚಿಕಿತ್ಸೆ ನೀಡಬಹುದಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.