ADVERTISEMENT

ಹಡಪದ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆ: ಬೊಮ್ಮಾಯಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 18:48 IST
Last Updated 1 ಫೆಬ್ರುವರಿ 2023, 18:48 IST
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯಲ್ಲಿ ಬುಧವಾರ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಹಾಗೂ ಹಡಪದ ಸಮಾಜದ ರಾಜ್ಯಮಟ್ಟದ ಜನ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ನಮಸ್ಕರಿಸಿದರು
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯಲ್ಲಿ ಬುಧವಾರ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಹಾಗೂ ಹಡಪದ ಸಮಾಜದ ರಾಜ್ಯಮಟ್ಟದ ಜನ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ನಮಸ್ಕರಿಸಿದರು   

ವಿಜಯಪುರ: ‘ಹಡಪದ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು. ಕುಲ ಶಾಸ್ತ್ರೀಯ ಅಧ್ಯಯನ ಪೂರ್ಣಗೊಳಿಸಿ, ಸಮಾಜಕ್ಕೆ ನ್ಯಾಯ ಒದಗಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯಲ್ಲಿ ಬುಧವಾರ ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ, ನೂತನ ಕಟ್ಟಡಗಳ ಅಡಿಗಲ್ಲು ಸಮಾರಂಭ ಹಾಗೂ ಹಡಪದ ಸಮಾಜದ ರಾಜ್ಯಮಟ್ಟದ ಜನ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿವಶರಣ ಹಡಪದ ಅಪ್ಪಣ್ಣ ಜನ್ಮ ಸ್ಥಳ ಮಸಬಿನಾಳ ಹಾಗೂ ಶಿವಶರಣೆ ಹಡಪದ ಲಿಂಗಮ್ಮ ಜನ್ಮಸ್ಥಳ ದೇಗಿನಾಳವನ್ನು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಲು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ADVERTISEMENT

‘ಹಡಪದ ಸಮಾಜದ ಮಠದ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ₹ 1 ಕೋಟಿ ಕೊಟ್ಟಿದ್ದಾರೆ. ನಾನು ₹ 3 ಕೋಟಿ ಅನುದಾನ ಕೊಟ್ಟಿದ್ದೇನೆ.‌ ಇನ್ನೂ ಹೆಚ್ಚಿನ ಅನುದಾನ ನೀಡುತ್ತೇನೆ’ ಎಂದು ಭರವಸೆ ನೀಡಿದರು.

ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ‘ಹಡಪದ ಸಮಾಜವನ್ನು ಪ್ರವರ್ಗ 3ಬಿ ಮತ್ತು 2 ಎ ದಲ್ಲಿರುವ ಹಡಪದ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಬೇಕು’ ಎಂದು ಮನವಿ ಮಾಡಿದರು.

‘ತಂಗಡಗಿಯಲ್ಲಿ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ₹ 25 ಕೋಟಿ ಅನುದಾನ ನೀಡಬೇಕು’ ಎಂದು ಮನವಿ ಮಾಡಿದರು.

ಜಲ‌ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಮಾಜದ ಮುಖಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.