ADVERTISEMENT

ಅಂಚೆ ಪತ್ರಗಳ ಬುಕ್ಕಿಂಗ್ ಇನ್ನಷ್ಟು ಸರಳ: ಮಹಾಂತೇಶ ತೊಗರಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 5:11 IST
Last Updated 13 ಫೆಬ್ರುವರಿ 2026, 5:11 IST
   

ವಿಜಯಪುರ: ಜಿಲ್ಲೆಯ ಎಲ್ಲಾ ಅಂಚೆ ಕಚೇರಿಗಳಲ್ಲಿ ಕಚೇರಿ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ಪತ್ರಗಳನ್ನು ಮತ್ತು ಪಾರ್ಸಲ್‌ಗಳನ್ನು ಬುಕ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಅಂಚೆ ಅಧೀಕ್ಷಕ ಮಹಾಂತೇಶ ತೊಗರಿ ತಿಳಿಸಿದ್ದಾರೆ.

ಈ ಹೊಸ ವ್ಯವಸ್ಥೆಯಡಿ ಕಚೇರಿ ಕಾರ್ಯ ಮುಕ್ತಾಯಕ್ಕೆ ಮುನ್ನ 30 ನಿಮಿಷಗಳವರೆಗೆ ಸ್ಪೀಡ್ ಪೋಸ್ಟ್ ಹಾಗೂ ಪಾರ್ಸಲ್‌ಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಇದರಿಂದ ಕಚೇರಿ ಸಮಯದ ಅಂತ್ಯದಲ್ಲಿ ಅಂಚೆ ಕಚೇರಿಗೆ ಆಗಮಿಸುವ ಗ್ರಾಹಕರಿಗೂ ತಮ್ಮ ಅಂಚೆ ವಸ್ತುಗಳನ್ನು ಸುಲಭವಾಗಿ ಬುಕ್ ಮಾಡಲು ಅನುಕೂಲವಾಗಲಿದೆ.

ಸಾರ್ವಜನಿಕರ ಸೌಕರ್ಯಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ https://app.indiapost.gov.in/customer-selfservice/login ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರ್ಯಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಸೇರಿದಂತೆ ಅನೇಕ ಸೇವೆಗಳನ್ನು ಆನ್‌ಲೈನ್ ಮೂಲಕವೇ ಪಡೆಯಬಹುದು.

ADVERTISEMENT

ಡಿಜಿಟಲ್ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.